ಈ ಎಲ್ಲ ಕತೆಗಳ ಕೇಂದ್ರದಲ್ಲಿರುವುದು ಸಾಮಾನ್ಯ ರಷ್ಯನ್ನರು. ಅವರ ಬದುಕಿನ ಸುತ್ತ ಹೆಣೆದ ದೃಷ್ಟಾಂತಗಳಂತಿರುವ ಈ ಕತೆಗಳು ಮೇಲುನೋಟಕ್ಕೆ ಸರಳವೆನಿಸಿದರೂ ಬದುಕನ್ನು ಕುರಿತು ಅನೇಕ ಮೂಲಭೂತವಾದ ತಾತ್ತ್ವಿಕ ಪ್ರಶ್ನೆಗಳ ಚಿಂತನ ಮಂಥನವನ್ನು ನಡೆಸುತ್ತವೆ...
ಟಿ.ಪಿ. ಅಶೋಕ
(ಮುನ್ನುಡಿಯಿಂದ)
A Kannada book by Akshara Prakashana / ಅಕ್ಷರ ಪ್ರಕಾಶನ
ಸಾಗರದ ಲಾಲ್ ಬಹಾದೂರ್ ಕಾಲೇಜಿನಲ್ಲಿ ಬಿ.ಎ. ಪದವಿಯನ್ನೂ ಬೆಂಗಳೂರಿನ ಸೇಂಟ್ ಜೋಸೆಫ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಎಂ.ಎ. ವಿದ್ಯಾಭ್ಯಾಸವನ್ನೂ ಮುಗಿಸಿದ ಮಾಧವ ಚಿಪ್ಪಳಿ ಅವರು ಮಣಿಪಾಲ ವಿಶ್ವವಿದ್ಯಾಲಯದಿಂದ ಭಾಷಾತತ್ತ್ವಶಾಸ್ತ್ರ ಮತ್ತು ಭಾಷಾಂತರ ಅಧ್ಯಯನದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಅವರು ಅನುವಾದಿಸಿರುವ 'ಆರು ಟಾಲ್‍ಸ್ಟಾಯ್ ಕತೆಗಳು' ಮತ್ತು ಜಿಯಾವುದ್ದೀನ್ ಸರ್ದಾರರ 'ಸ್ವರ್ಗ ಸಾಧನೆಯ ಉತ್ಕಟ ಬಯಕೆ: ಸಂದೇಹಿ ಮುಸ್ಲಿಮನ ಯಾತ್ರೆಗಳು' ಈಗಾಗಲೇ ಪ್ರಕಟಗೊಂಡಿವೆ. ಅವರ 'ಆರು ಟಾಲ್‍ಸ್ಟಾಯ್ ಕತೆಗಳು' ಪುಸ್ತಕಕ್ಕೆ ಕುವೆಂಪು ಭಾಷಾಭಾರತಿ ಪ್ರಾಧಿಕಾರದ 2009ನೇ ಸಾಲಿನ ಅನುವಾದ ಪುರಸ್ಕಾರ ಸಿಕ್ಕಿದೆ. ಸದ್ಯ ಸಾಗರದ ಸಮೀಪ ಚಿಪ್ಪಳಿಯಲ್ಲಿ ನೆಲೆಸಿರುವ ಮಾಧವ, ಅಡಿಕೆ ವ್ಯವಸಾಯ ಮತ್ತು ವ್ಯವಹಾರದಲ್ಲಿ ತೊಡಗಿದ್ದಾರೆ.
Count Lev Nikolayevich Tolstoy, usually referred to in English as Leo Tolstoy, was a Russian writer who is regarded as one of the greatest authors of all time.